KANNADA ALERT DESK
ಮನೆಯ
ಬಾತ್ ರೂಮ್ನಲ್ಲಿ ಯುವತಿ ಮೃತದೇಹ ಪತ್ತೆಯಾದ ಸಂಬಂಧ ಪೊಲೀಸರು ಹತ್ಯೆ ದೂರು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು:
ಮನೆಯ
ಬಾತ್ ರೂಮ್ನಲ್ಲಿ ಯುವತಿ ಮೃತದೇಹ ಪತ್ತೆಯಾದ ಸಂಬಂಧ ಪೊಲೀಸರು ಹತ್ಯೆ ದೂರು ದಾಖಲಿಸಿಕೊಂಡಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗಳ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ತಾಯಿ ಸೌಮ್ಯ.ಕೆ.ಆರ್ ದೂರು
ನೀಡಿದ್ದು, ಅದರನ್ವಯ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದ್ವಿತೀಯ
ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಬುದ್ಧಾ (19) ಕತ್ತು, ಕೈ
ಕೊಯ್ದುಕೊಂಡ ಸ್ಥಿತಿಯಲ್ಲಿ ಮನೆಯ ಬಾತ್ ರೂಮಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮೇ 15ರಂದು ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯ ಬೃಂದಾವನ ಲೇಔಟ್ನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿತ್ತು. ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದ ಪೊಲೀಸರು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು.
ಮಗಳು
ಆತ್ಮಹತ್ಯೆ ಮಾಡಿಕೊಳ್ಳುವಂಥವಳಲ್ಲ, ಆಕೆಯನ್ನ ಯಾರೋ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಯುವತಿಯ ತಾಯಿ ಸೌಮ್ಯ ಆರೋಪಿಸಿ, ಸೂಕ್ತ ತನಿಖೆ ನಡೆಸುವಂತೆ ದೂರು ನೀಡಿದ್ದರು. ಆ ದೂರಿನ ಅನ್ವಯ
ಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
Social Icons