KANNADA ALERT DESK
ಮೈಸೂರು: ಕಲುಷಿತ ನೀರು ಸೇವಿಸಿ ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಓರ್ವ ಸಾವು, 35ಕ್ಕೂ ಹೆಚ್ಚು ಜನ ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿಯ ಮೂರು ಅಧಿಕಾರಿಗಳ ಅಮಾನತು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿಗೂ ಮುನ್ನ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಡಿಸಿ ವರದಿ ಅಧರಿಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನಿಯಮಿತವಾಗಿ
ಕುಡಿಯುವ ನೀರಿನ ಟ್ಯಾಂಕರ್ ಸ್ವಚ್ಛಗೊಳಿಸಲು ಸೂಚಿಸಿದ್ದೇನೆ. ಕೆ.ಸಾಲುಂಡಿ ಗ್ರಾಮಕ್ಕೆ
ಕಲುಷಿತ ನೀರು ಸರಬರಾಜು ಆಗಿದೆ. ಕುಡಿಯುವ ನೀರನ್ನು ಯಾರೂ ಪರೀಕ್ಷೆ ಮಾಡಿಲ್ಲ, ಹೀಗಾಗಿ ಘಟನೆ ನಡೆದಿದೆ ಎಂದಿದ್ದಾರೆ.

Social Icons