KANNADA ALERT DESK
ಮಂಗಳೂರು: ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ 6 ರಲ್ಲಿ 6 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದ್ದಾರೆ.
ನಗರದ
ಕಾಂಗ್ರೆಸ್ ಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ವಿಧಾನ ಪರಿಷತ್ ಸದಸ್ಯರಾಗಿದ್ದವರು ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಮಂಜುನಾಥ್ ಕಳೆದ
ಬಾರಿ ಕಡಿಮೆ ಮತಗಳಿಂದ ಸೋತವರು. ಹೀಗಾಗಿ ಇಬ್ಬರೂ ಸುಲಭವಾಗಿ ಜಯಗಳಿಸಲಿದ್ದಾರೆ ಎಂದರು.
ಮುಖ್ಯಮಂತ್ರಿ
ಸಿದ್ದರಾಮಯ್ಯ ನೇತೃತ್ವದ ಸರಕಾರ
ಒಂದು
ವರ್ಷದ ಅವಧಿಯಲ್ಲಿ ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು
ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಯುವಜನರ ಮತ್ತು ಶಿಕ್ಷಕರಿಗೆ ಅನುಕೂಲವಾದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಶಿಕ್ಷಕರ ಅನೇಕ ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದರು.
ದೇಶದಲ್ಲಿ
BJP ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಪರ ಚಿಂತನೆ ನಡೆಸದೆ
ಸಮಾಜವನ್ನು ಒಡೆದು ಆಳುವ ಮಾತುಗಳನ್ನು ಆಡುತ್ತಿದ್ದಾರೆ. ಅವರು ಮತ್ತೆ ಪ್ರಧಾನಿಯಾಗುವುದಿಲ್ಲ. ಬಿಜೆಪಿಗೆ ಬಹುಮತ ದೊರೆಯುವುದಿಲ್ಲ. ಕಾಂಗ್ರೆಸ್ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ರಾಹುಲ್ ಗಾಂಧಿ ಮುಂದಿನ ಪ್ರಧಾನಿಯಾಗಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 28 ಲೋಕಸಭಾ ಕ್ಷೇತ್ರಗಳ ಪೈಕಿ 20ರಲ್ಲಿ ಜಯ ಗಳಿಸಲಿದೆ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್
ಅಧ್ಯಕ್ಷ ಕೆ ಹರೀಶ್ ಕುಮಾರ್,
ಮಾಜಿ ಎಂಎಲ್ಎ ಶಕುಂತಲಾ ಟಿ. ಶೆಟ್ಟಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ ಮತ್ತು ಅಶ್ರಫ್ ಕೆ, ಪಕ್ಷದ ಮುಖಂಡರಾದ ಎಂ . ಎ. ಗಫೂರ್, ಶಾಲೆಟ್
ಪಿಂಟೊ, ಸದಾಶಿವ ಉಳ್ಳಾಲ್, ಆರಿಫ್ ಬಾವಾ, ತೇಜಸ್ವಿರಾಜ್, ದಿನೇಶ್ ಆಳ್ವ, ನಝೀರ್ ಬಜಾಲ್, ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Social Icons