ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG- 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಗ್ರೇಸ್ ಅಂಕ ನೀಡಲಾದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರು-ಪರೀಕ್ಷೆಯನ್ನು ತೆಗೆದುಕೊಳ್ಳಲು ಆಯ್ಕೆಯನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ರಹಿತವಾಗಿ ಅವರು ನೈಜವಾಗಿ ಪಡೆದ ಅಂಕಗಳನ್ನು ತಿಳಿಸಲಾಗುತ್ತದೆ. ಮರು ಪರೀಕ್ಷೆಗೆ ಹಾಜರಾಗಲು ಅವರಿಗೆ ಆಯ್ಕೆಯನ್ನು ನೀಡಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ.
ಸುಪ್ರೀಂ ಕೋರ್ಟ್ಗೆ ಈ ಮಾಹಿತಿ ತಿಳಿಸಿರುವ ಕೇಂದ್ರ ಸರಕಾರ ಗ್ರೇಸ್ ಅಂಕಗಳನ್ನು ಪಡೆದಿರುವ 1,563 ಓಇಇಖಿ-Uಉ 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಮರು ಪರೀಕ್ಷೆಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳ ಫಲಿತಾಂಶಗಳು ಮೇ 5 ರಂದು ನಡೆದ ಪರೀಕ್ಷೆಗಳ ಅಂಕಗಳನ್ನು ಆಧರಿಸಿದೆ. ಕೌನ್ಸೆಲಿಂಗ್ ನಿಗದಿತವಾಗಿ ಮುಂದುವರಿಯುತ್ತದೆ, ಯಾವುದೇ ಅಡ್ಡಿಯಾಗುವುದಿಲ್ಲ. ಪರೀಕ್ಷೆ ಮುಂದುವರಿದರೆ, ಉಳಿದವು ನಿಗದಿ ಪ್ರಕಾರ ಅದಕ್ಕೆ ಸರಿಯಾಗಿ ನಡೆಯುತ್ತದೆ. ಆದ್ದರಿಂದ ಇಲ್ಲಿ ಯಾವುದೇ ಆತಂಕಕ್ಕೆ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ರದ್ದತಿ ಸೇರಿದಂತೆ ಎಲ್ಲಾ ಅರ್ಜಿಗಳನ್ನು ಜುಲೈ 8 ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Social Icons