ಕುವೈತ್‌ನಲ್ಲಿ ಭಾರೀ ಅಗ್ನಿ ದುರಂತ: ಭಾರತೀಯರು ಸೇರಿದಂತೆ 40 ಜನರು ಸಾವು

 


ಪಿಟಿಐ ಸುದ್ದಿ


 ಹೊಸದಿಲ್ಲಿ: ದಕ್ಷಿಣ ಕುವೈತ್‌ನಲ್ಲಿ ಕಾರ್ಮಿಕರ ವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ 40 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ‌ . ಇವರಲ್ಲಿ ಹೆಚ್ಚಿನವರು ಭಾರತೀಯರು ಆಗಿದ್ದಾರೆ. ಸತ್ತವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.


 ಬೆಂಕಿಯ ಘಟನೆಯನ್ನು "ದುಃಖದಾಯಕ" ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದ್ದಾರೆ.


 "ಕುವೈತ್ ನಗರದಲ್ಲಿ ಸಂಭವಿಸಿದ ಅಗ್ನಿ ದುರಂತವು ದುಃಖಕರವಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ  ಎಂದು ಮೋದಿ ಎಕ್ಸ್‌ನಲ್ಲಿ ಹೇಳಿದರು