ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್‌ಗ ಮುಂದೆ ಹಾಜರುಪಡಿಸಿದ್ದರು. ಕಸ್ಟಡಿಗೆ ತೆಗೆದುಕೊಂಡ ಸಮಯ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳಾದ ದರ್ಶನ್, ಧನರಾಜ್, ವಿನಯ್, ಪ್ರದೋಷ್‌ರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
12 ದಿನಗಳ ಕಾಲ ಕಸ್ಟಡಿ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಮತ್ತೆ ಕಸ್ಟಡಿ ಅಗತ್ಯವಿಲ್ಲ ಎಂದು ಕೋರ್ಟ್‌ಗೆ ಪೊಲೀಸರು ವರದಿ ನೀಡಿದ್ದಾರೆ. ಆದ್ದರಿಂದ ನ್ಯಾಯಾಧೀಶರು ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್‌ನ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳು ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಅವರಿಗೂ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ
ಇಂದು ನಟ ದರ್ಶನ್ ಅವರು 2ನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿದ್ದ ಕೇಸ್‌ನಲ್ಲಿ ದರ್ಶನ್ ಜೈಲು ಪಾಲಾಗಿದ್ದರು. ಇಂದು ಕೋರ್ಟ್ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ 2ನೇ ಬಾರಿ ಜೈಲು ಸೇರಿಕೊಂಡಿದ್ದಾರೆ. ಅವರಿಗೆ ವಿಚಾರಣಾಧೀನ ಖೈದಿ ನಂಬರ್ 6106 ನೀಡಲಾಗಿದೆ.

Social Icons