ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು anticipatory bail

 



ಬೆಂಗಳೂರು: ಪ್ರಜ್ವಲ್ ರೇವಣ್ಣನಿಂದ ಲೈಂಗಿಕ ದೌರ್ಜನ್ಯ ಕ್ಕೆ ಒಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಅಪಹರಣ ಸಂಬಂಧ ಆತನ ತಾಯಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ,  ಭವಾನಿ ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸುವಂತಿಲ್ಲವೆಂದು ಷರತ್ತು ವಿಧಿಸಿ

ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ವಿಚಾರಣೆ ವೇಳೆ ಭವಾನಿ ರೇವಣ್ಣ ತನಿಖೆಗೆ ಸಹಕರಿಸಿಲ್ಲವೆಂದು ಎಸ್‌ಐಟಿ ವಾದ ಮಂಡಿಸಿತ್ತು. ಆದರೆ ಭವಾನಿ ರೇವಣ್ಣ ಎಸ್‌ಐಟಿಯ ಎಲ್ಲ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆಂದು ಆ ವಾದವನ್ನು ತಳ್ಳಿ ಹಾಕಿತ್ತು.