ಮಹಿಳೆಗೆ ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಹಾಕಿದ ಹಾಸನದ ವ್ಯಕ್ತಿ

 


 

ವರದಿ: ಕವಿತಾ ಕೆ ಮಾಣಿ

 

ಬಂಟ್ವಾಳ: ಹಾಸನ ಮೂಲದ ವ್ಯಕ್ಯಿಯೋರ್ವ ಒಂಟಿ ಮಹಿಳೆಯ  ಮನೆಗೆ ನುಗ್ಗಿ  ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕ ದಲ್ಲಿ ನಡೆದಿದೆ.

 

 ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

 ಸಂತ್ರಸ್ತ ಮಹಿಳೆ ಕಲ್ಲಡ್ಕ ಸಮೀಪದವರಾಗಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

 

 ಮಹಿಳೆಯ ಸ್ವಂತ ಊರು ಹಾಸನದಲ್ಲಿ  ಪ್ರಮೋದ್ ರಿಕ್ಷಾ ಚಾಲಕನಾಗಿದ್ದ. ಒಂದೆರೆಡು ಬಾರಿ ತಾಯಿ ಮನೆಗೆ ಈತನ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಹೋಗಿರುವಾಗ ಸಂತ್ರಸ್ತ ಮಹಿಳೆಗೆ ಈತ ಪರಿಚಯಸ್ಥನಾಗಿದ್ದು, ಮೊಬೈಲ್ ‌ನಂಬರ್ ನ್ನು ಆತ ಪಡೆದುಕೊಂಡಿದ್ದ ಎನ್ನಲಾಗಿದೆ.

 

ಮೊಬೈಲ್ ಮೂಲಕ ಈತನ‌ ಸಂಪರ್ಕ ಅತಿಯಾಗಿ ಕಳೆದ ಕೆಲ ಸಮಯದ ಹಿಂದೆ ಗಂಡನ ಮನೆ ಕಲ್ಲಡ್ಕಕ್ಕೆ ಬಂದಿದ್ದ. ಮನೆಗೆ ಬಂದ ಈತ ಮಹಿಳೆಗೆ ಕೀಟಲೆ ನೀಡಿದ್ದಲ್ಲದೇ, ಮನೆಯೊಳಗೆ ಇದ್ದ ಅನೇಕ ಬೆಲೆ ಬಾಳುವ ವಸ್ತುಗಳನ್ನು ಹಾಳು ಮಾಡಿ ಹೋಗಿದ್ದ. ಈ ಸಂದರ್ಭದಲ್ಲಿ ಆತನಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು ಎಂದು ಹೇಳಲಾಗಿದೆ.

 

   ಇದೀಗ ಮತ್ತೆ ಹಾಸನದಿಂದ ಬಂಟ್ವಾಳಕ್ಕೆ ಬಂದಿಳಿದ ಆರೋಪಿ ‌ಪ್ರಮೋದ್ ಮತ್ತೆ ಗಂಡನಿಲ್ಲದ ಸಮಯ ನೋಡಿಕೊಂಡು ಮಹಿಳೆಯ ಮನೆಗೆ ನುಗ್ಗಿದ್ದಾನೆ. ಮಹಿಳೆಯನ್ನು ತಬ್ಬಿ‌ಹಿಡಿದು ಲೈಂಗಿಕವಾಗಿ ಉಪಯೋಗಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.

  ಮಹಿಳೆ ಜೋರಾಗಿ ಬೊಬ್ಬೆ ಹೊಡೆದಾಗ ಮನೆಯ ‌ಸಮೀಪದ ದೇವಲದೊಳಗೆ ಇದ್ದ ಗಂಡ ಬಂದು ರಕ್ಷಣೆ ಮಾಡಿದ್ದಾನೆ ಎಂದು ‌ಹೇಳಲಾಗಿದೆ. ಈ ಸಂದರ್ಭದಲ್ಲಿ ಮಹಿಳೆಗೆ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ , ಗಂಡ ಮಗುವಿನ ಜೊತೆ ಸೇರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದಾನೆ ಎಂದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ

  ಇದೀಗ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಠಾ‌ಣಾ ಪೋಲೀಸರು  ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ‌ಹಾಜರುಪಡಿಸಿದ್ದಾರೆ.