ಬೆಂಗಳೂರು: ಪರವಾನಿಗೆ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿವಿ ಕನ್ನಡ ಚಾನೆಲ್ ತಕ್ಷಣದಿಂದಲೇ ತನ್ನ ಎಲ್ಲಾ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.
ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ. ರಮೇಶ್ ಗೌಡ, ಡಾ.ಎ.ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಸಲ್ಲಿಸಿದ ರಿಟ್ ಅರ್ಜಿಗಳನ್ನು ಮಂಗಳವಾರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು. ವಾದ ಮಂಡಿಸಿದ ಹೈಕೋರ್ಟ್ ಹಿರಿಯ ವಕೀಲ ಪ್ರಭುಲಿಂಗ ಅವರು, ಪ್ರತಿವಾದಿ ರಾಕೇಶ್ ಶೆಟ್ಟಿಯವದು ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ವಾಸ್ತವದಲ್ಲಿ ಇವರ ಚಾನೆಲ್ ಕಾನೂನುಬಾಹಿರವಾಗಿ ನಡೆಯುತ್ತಿದೆ. 2021ರಿಂದಲೂ ಚಾನೆಲ್‌ನ ಪರವಾನಿಗೆ ನವೀಕರಿಸಿಲ್ಲ ಎಂಬ ಅಂಶಗಳನ್ನು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ.
ವಾದವನ್ನು ಆಲಿಸಿದ ನ್ಯಾಯಪೀಠವು ಪ್ರತಿವಾದಿ ರಾಕೇಶ್ ಶೆಟ್ಟಿಯವರು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಗಳ ಕಾಯ್ದೆ 1995ರ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂಬುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ತಮ್ಮ ಚಾನೆಲ್‌ನಲ್ಲಿ ಜುಲೈ 8ರವರೆಗೂ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ಆದೇಶಿಸಿದೆ.

Social Icons