ವರದಿ: ಹರೀಶ್ ಮಾಂಬಾಡಿ’
ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ.
ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.
ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ದೊರೆತಿಲ್ಲ. ಆತ್ಯಂತ ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ಈತ ಇಲ್ಲಿನ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಈತನ ಅಣ್ಣನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನು. ಬಂಟ್ವಾಳ ನಗರ ಠಾಣಾ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Social Icons