ರಾಜ್ಯದ ಎಲ್ಲಾ ಶಾಲೆಗಳಲ್ಲಿ Birthday Celebratonಗೆ ನಿಷೇಧ ಹೇರಿದ ಸರಕಾರ| ಏನಿದು ಆದೇಶ?|

 ಬೆಂಗಳೂರು: ಹುಟ್ಟುಹಬ್ಬ ಆಚರಣೆ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಬಹುತೇಕರಿಗೆ ಅಚ್ಚುಮೆಚ್ಚಿನ ವಿಚಾರ. ಆದರೆ ಈಗ ಹುಟ್ಟುಹಬ್ಬ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ವಿಭಿನ್ನ ಆದೇಶವೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ  ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ರಾಜ್ಯ ಸರ್ಕಾರವು ಆದೇಶ ಮಾಡಿದೆ. ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ನಿಷೇಧಿಸಿ ಸರ್ಕಾರ ಸುತ್ತೋಲೆಯಲ್ಲಿ ಆದೇಶಿಸಿದೆ.



ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತ್ತಿಲ್ಲ. ಫೆಬ್ರವರಿ 2024 ರಲ್ಲಿ ಹೊರಡಿಸಲಾದ ಆದೇಶದ ಪ್ರಕಾರ ರಾಷ್ಟ್ರೀಯ ರಜಾದಿನಗಳು, ರಾಜ್ಯ ಹಬ್ಬಗಳು ಮತ್ತು ಜಯಂತಿಗಳನ್ನು ಮಾತ್ರ ಆಚರಿಸಲು ಅನುಮತಿ ಇದೆ. ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಇತ್ಯಾದಿ ಗಣ್ಯವ್ಯಕ್ತಿಗಳು ಅವರ ಹಾಗೂ ಅವರ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ವೇಳೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವವರ ಜೊತೆಗೆ ಹೋಲಿಕೆ ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.

ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟುಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿμÉೀಧಿಸಲಾಗಿದೆ.