ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ



ಬೆಳ್ತಂಗಡಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪನವರು ಶ್ರೀಕ್ಷೇತ್ರಧರ್ಮಸ್ಥಳಕ್ಕೆ ಇಂದು ಭೇಟಿ ನೀಡಿದ್ದಾರೆ.

ನಿನ್ನೆ ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯವಿದ್ದ ಯಡಿಯೂರಪ್ಪನವರು, ಇಂದು ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದು ವಿಶೇಷ ಪೂಜೆ ಮಾಡಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತನಾಡಿದರು.

ಬಳಿಕ ಮಾತನಾಡಿದ ಬಿಎಸ್‌ವೈ ಅವರು, ಬಹಳ ವರ್ಷಗಳ ಬಳಿಕ ನಾನು ಶ್ರೀವಮಂಜುನಾಥಸ್ವಾಮಿ ದರ್ಶನ ಪಡೆದಿದ್ದೇನೆ. ಹೆಗ್ಗಡೆಯವರ ಆಶೀರ್ವಾದ ಕೂಡ ದೊರೆತಿದೆ. ನಮ್ಮ ಭಾಗದಲ್ಲಿ ಒಂದು ರೀತಿಯ ಬರಗಾಲ ಆವರಿಸಿದೆ. ಸಕಾಲದಲ್ಲಿ ಮಳೆ ಬೆಳೆಯಾಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ.‌ ಬರುವ ದಿನಗಳು ಒಳ್ಳೆ ದಿನಗಳಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ ಎಂದರು.

ಧರ್ಮಸ್ಥಳದಿಂದ ಯಡಿಯೂರಪ್ಪ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದಾರೆ.