ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕ್ತಿದ್ದೀರಾ?!- Canara Bankನಲ್ಲಿದೆ ಉದ್ಯೋಗಾವಕಾಶ

ಬೆಂಗಳೂರು: ಬ್ಯಾಂಕ್ ನಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಒಂದು‌ ಸಿಹಿ‌ ಸುದ್ದಿ. ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್ ಆಗಿರುವ  ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.



ಹುದ್ದೆಯ ವಿವರ

ಅಕೌಂಟ್ಸ್

ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ

ವಯೋಮಿತಿ ಎಷ್ಟು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 25 ವರ್ಷ, ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ ಏನು?

ಬಿ.ಕಾಂ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನದ ಅಗತ್ಯವಿದೆ.

ಅರ್ಜಿ ಸಲ್ಲಿಕೆ ಹೇಗೆ?:

ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.(https://canarabank.com/pages/Recruitment)

ನೇಮಕಾತಿ ವಿಭಾಗದ ಅಡಿಯಲ್ಲಿ ಅಪ್ಲಿಕೇಶನ್ ಡೌನ್ ಲೋಡ್ ಮಾಡಿ

ಸರಿಯಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ

ನಿಮ್ಮ ಫೋಟೋ ಮತ್ತು ಸಹಿ ಸೇರಿದಂತೆ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಅನುಭವದ ಪುರಾವೆಗಳಂತಹ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಕ್ಯಾನ್ ಬ್ಯಾಂಕ್ ವೆಂಚರ್ ಕ್ಯಾಪಿಟಲ್ ಫಂಡ್ ಲಿಮಿಟೆಡ್ (CVCFL) ಬೆಂಗಳೂರು -560004

ಅರ್ಜಿ ಶುಲ್ಕ:

ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 300 ರೂ.

ಇತರೆ ಅಭ್ಯರ್ಥಿಗಳಿಗೆ 500 ರೂ.

ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಮುಖಾಮುಖಿ ಸಂದರ್ಶನದ ಬಳಿಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು 12 ತಿಂಗಳ ಪ್ರೊಬೇಷನರಿ ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.

ಜೂ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹಾಗಿದ್ರೆ ತಡ ಯಾಕೆ? ಈ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಕೂಡಲೇ ಅಪ್ಲೈ ಮಾಡಿ. 


ಜೂ.30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹಾಗಿದ್ರೆ ತಡ ಯಾಕೆ? ಈ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಕೂಡಲೇ ಅಪ್ಲೈ ಮಾಡಿ.