ಶಿಥಿಲಗೊಂಡಿರುವ ಚೆಲ್ಯಡ್ಯ ಸೇತುವೆಗೆ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಭೇಟಿ

 


ವರದಿ: ಕವಿತಾ ಕೆ ಮಾಣಿ

ದ.ಕ. ಜಿಲ್ಲೆಯ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆ  ಶಿಥಿಲಗೊಂಡಿದ್ದು, ಸ್ಥಳಕ್ಕೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೇಟಿ ನೀಡಿದ್ದಾರೆ.




ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿತ್ತು.  ಸೇತುವೆಯ ಪರಿಸ್ಥಿಯನ್ನ ಗಮನಿಸಿ ಈ ಭಾಗದ ಜನರಲ್ಲಿ ಜಿಲ್ಲಾಧಿಕಾರಿ ಮಾಹಿತಿ ಪಡೆದುಕೊಂಡಿದ್ದಾರೆ. 

ಸೇತುವೆ ವೀಕ್ಷಣೆ ಬಳಿಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಧ್ಯಮದ ಮುಂದೆ ಮಾತನಾಡಿ, ಚೆಲ್ಯಡ್ಕ ಸೇತುವೆಯಲ್ಲಿ ಇಂದಿನಿಂದಲೇ ಘನವಾಹನ ಸಂಚಾರವನ್ನ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದು, ರಾತ್ರಿ 8 ರಿಂದ ಬೆಳಗ್ಗೆ 6ರ ವರೆಗೆ ಸಂಪೂರ್ಣ ವಾಹನ ಸಂಚಾರ ನಿಷೇಧ ಹೇರಲಾಗಿದೆ.  ಬೆಳಗ್ಗೆ ಅವಧಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. 



ಮಳೆಗಾಲ ಮುಗಿದ ಬಳಿಕ ಸೇತುವೆಯ ಕಾಮಗಾರಿ ಆರಂಭವಾಗಲಿದ್ದು, ಈಗಾಗ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. ಪುತ್ತೂರು ಶಾಸಕರು ಈ ಬಗ್ಗೆ ಮಾಹಿತಿಯನ್ನೂ ನೀಡಿದ್ದಾರೆ. ಮಳೆಗಾಲ ಮುಗಿದ ಬಳಿಕ ತಕ್ಷಣ ಚೆಲ್ಯಡ್ಕ ಸೇತುವೆಯ ಕಾಮಗಾರಿ ಆರಂಭಿಸಲಾಗುವುದು ಎಂದರು. 

ಜಿಲ್ಲಾಧಿಕಾರಿಗೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ತಹಶೀಲ್ದಾರ್ ಪುರಂದರ ಹೆಗ್ಡೆ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಬಂಡಾರಿ, ಸಾಥ್ ನೀಡಿದ್ರು.