ಅಲ್ಪಸಂಖ್ಯಾತ Engineering, Medical‌ ವಿದ್ಯಾರ್ಥಿಗಳಿಗೆ ಸಿಗಲಿದೆ 5 ಲಕ್ಷದವರೆಗೆ ಸಾಲ



ಬೆಂಗಳೂರು: 2024-25ನೇ ಸಾಲಿನಲ್ಲಿ ಸಿಇಟಿ -ನೀಟ್‌ನಲ್ಲಿ ಆಯ್ಕೆಯಾದ MBBS, BDS, BE, BTech, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ ಮೊದಲಾದ ಕೋರ್ಸ್‌ಗಳಿಗೆ ಅರಿವು ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

50 ಸಾವಿರ ರೂಪಾಯಿಯಿಂದ 5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯ ದೊರೆಯಲಿದೆ.

2024ರ ಜೂನ್ 21ರಿಂದ ಅರ್ಜಿ ಸಲ್ಲಿಕೆ ಪ್ರಾರಂಭಗೊಂಡಿದ್ದು, 2024ರ ಜುಲೈ 7 ಕೊನೆಯ ದಿನ.

KMDC ವೆಬ್‌ಸೈಟ್ kmdconline.karnataka.gov.in ನಲ್ಲಿ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಮೂಲ indemnity bond ಮತ್ತು ಸಾಲಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.