ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತಕ್ಷಣದಿಂದಲೇ ವೇತನ ಪರಿಷ್ಕರಣೆಗೆ ಸರ್ಕಾರದ ಚಿಂತನೆ
(File Photo)
.. ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಏಳನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಸೂಚನೆ ನೀಡಿದ್ದು, ವೇತನ ಪರಿಷ್ಕರಣೆ ತಕ್ಷಣದಿಂದಲೇ ಜಾರಿ ಸಾಧ್ಯತೆ ಇದೆ.
.. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜುಲೈ 1 ರಿಂದ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸುವ ಸ್ಪಷ್ಟ ಸೂಚನೆ ದೊರೆತಿದ್ದು, ಜುಲೈ 1ರಿಂದಲೇ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ಹೇಳಿವೆ.
Social Icons