ಹಿರಿಯ ಸಾಹಿತಿ ಡಾ. ಕಮಲ ಹಂಪನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸಂತಾಪ

 


ಬೆಂಗಳೂರು: ಹಿರಿಯ ಸಾಹಿತಿ, ನಾಡೋಜ ಡಾ.ಕಮಲ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ.


ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.


ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ''ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದ ಡಾ.ಕಮಲಾ ಅವರದ್ದು ಸರ್ವರಿಗೂ ಒಳಿತನ್ನು ಬಯಸಿದ ಜೀವ. ಡಾ.ಹಂಪ ನಾಗರಾಜಯ್ಯ ಮತ್ತವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ'' ಎಂದು ಕಂಬನಿ ಮಿಡಿದಿದ್ದಾರೆ.


ಮುಲ್ಕಿ: ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ ಹಾಗೂ ಸಾಹಿತಿ ಡಾ. ಕಮಲಾ ಹಂಪನಾ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಮಾಧ್ಯಮದ ಜೊತೆ ಮಾತನಾಡಿ ಡಾ. ಕಮಲಾ ಹಂಪನಾ ಕನ್ನಡ ಸಾಹಿತ್ಯಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. ಉತ್ತಮ ವಾಗ್ಮಿಯಾಗಿದ್ದ ಅವರು ಮಹಿಳೆಯರ ಸಾಹಿತ್ಯದ ಧ್ವನಿಯಾಗಿದ್ದರು ಎಂದು ಹೇಳಿದ್ದಾರೆ.

ಹಿರಿಯ ಸಾಹಿತಿ ಡಾ. ಕಮಲ ಹಂಪನಾ ನಿಧನಕ್ಕೆ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕಸಾಪ ಮಾಜೀ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು
ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಹೊಸಅಂಗಣ ಮಾಸಪತ್ರಿಕೆಯ ಸಂಪಾದಕ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಗೌತಮ್ ಜೈನ್ ಮುಲ್ಕಿ ಅರಮನೆ,ಬಪ್ಪನಾಡು ಲಯನ್ಸ್  ಕ್ಲಬ್ ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ, ಮತ್ತಿತರರು ತೀವ್ರ ಸಂತಾಪ  ವ್ಯಕ್ತಪಡಿಸಿದ್ದಾರೆ