ಮಾಜಿ ಸಿಎಂ ವೀರಪ್ಪ ಮೊಯ್ಲಿಯವರ ಪುತ್ರಿ ನಿಧನ

 


ಬೆಂಗಳೂರು: ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ವೀರಪ್ಪ ಮೊಯ್ಲಿಯವರ ಪುತ್ರಿ ಹಂಸಾ ಮೊಯ್ಲಿಯವರು ರವಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹಂಸಾ ಮೊಯ್ಲಿ(46)ಯವರು ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ರವಿವಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಂಸಾ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಇವರು ದೇವದಾಸಿಯವರ ಜೀವನವನ್ನು ಆಧರಿಸಿ ತಮಿಳಿನಲ್ಲಿ ನಿರ್ಮಾಣವಾಗಿರುವ ಶೃಂಗಾರಂ ಸಿನಿಮಾದಲ್ಲಿ ಅಭಿನಯಿಸಿ ನಟಿಯಾಗಿಯೂ ಗುರುತಿಸಿಕೊಂಡಿದ್ದರು.

ಹಂಸಾ ಮೊಯ್ಲಿಯವರ ನಿಧನದ ಸುದ್ದಿ ತಿಳಿದು ವೀರಪ್ಪ ಮೊಯ್ಲಿಯವರು ದೆಹಲಿಯಿಂದ ಬೆಂಗಳೂರಿನಿಂದ ಆಗಮಿಸುತ್ತಿದ್ದಾರೆ‌.