ಹುಬ್ಬಳ್ಳಿ: ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಮರ್ಡರ್​ - hubballi

 




ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ  ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿರುವ ಘಟನೆ‌ ನಡೆದಿದೆ.


 ಹುಬ್ಬಳ್ಳಿ ಲೋಹಿಯಾ ನಗರದಲ್ಲಿ ಈ ಘಟನೆ ನಡೆದಿದೆ. ಆಕಾಶ್ ಮಠಪತಿ(26) ಕೊಲೆಯಾದ ಯುವಕ. ಮೃತ ಯುವಕ ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರನಾಗಿದ್ದಾನೆ.


ಶನಿವಾರ ಸಂಜೆ ಅಪರಿಚಿತರು ಸಾರಾಯಿ‌ ಕುಡಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆಗೆ  ಕಾರಣ ಏನು ಎಂಬ ಮಾಹಿತಿ ತಿಳಿದು ಬರಬೇಕಿದೆ.

ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಸಿಪಿ ಕುಶಾಲ್ ಚೌಕ್ಸೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಸುರೇಶ್ ಯಳ್ಳೂರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ