ಚೂರಿ ಇರಿತ ಪ್ರಕರಣ: ಕಾಂಗ್ರೆಸ್ ಒತ್ತಡದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್ಐಆರ್: ಸಂಸದ ಕ್ಯಾ. ಬ್ರಿಜೇಶ್ ಚೌಟ I BRIJESH CHOWTA

 



 KANNADA ALERT DESK

ಮಂಗಳೂರು:ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾಂಗ್ರೆಸ್ ನಾಯಕರ ಒತ್ತಡದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಆರೋಪಿಸಿದರು‌.

 

 

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿದಕ್ಕೆ ದೇಶದ ಎಲ್ಲಾ ಭಾಗದಲ್ಲೂ ಸಂಭ್ರಮಾಚರಣೆ ನಡೆದಿದೆ.‌ಬಂಟ್ವಾಳದ ಬೋಳಿಯಾರ್ ನಲ್ಲಿಯು ಸಂಭ್ರಮ ನಡೆದಿದೆ. ಚೂರಿ ಇರಿತ ಘಟನೆಯ ಸಮಗ್ರ ತನಿಖೆ ಮಾಡಬೇಕು. ಆರೋಪಿಗಳಿಗೆ ಡ್ರ್ಯಾಗರ್ ಯಾರು ಕೊಟ್ರು, ಪ್ರೇರಣೆ ನೀಡಿದವರು ಯಾರೆಂಬ ತನಿಖೆ ಮಾಡಬೇಕು ಎಂದರು.

 


ತಪ್ಪು ಮಾಡಿದವರಿಗೆ ಸೂಕ್ತ ಶಿಕ್ಷೆ ನೀಡಬೇಕು. ಘಟನೆಯ ಹಿಂದಿರುವ ಶಕ್ತಿಗಳ ವಿರುದ್ಧವೂ ಕ್ರಮ ಆಗಬೇಕು.‌ಮಾರಣಾಂತಿಕ ಹಲ್ಲೆ ನಡೆದು ನಮ್ಮ ಇಬ್ಬರು ಕಾರ್ಯಕರ್ತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದೇ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರು ಬಂದರೂ ಗಾಯಗೊಂಡವರ‌ನ್ನು ವಿಚಾರಿಸಿಲ್ಲ.‌ಕಾಂಗ್ರೆಸ್ ಪಾರ್ಟಿಯ ಒತ್ತಡದಿಂ ದ ನಮ್ಮ ಕಾರ್ಯಕರ್ತರ ಮೇಲೆ ಎಫ್.ಐ.ಆರ್ ಆಗಿದೆ ಎಂದರು.

 

ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ಹಿಂದೂ ವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಕಾನೂನಿನ ಮುಖಾಂತರ ಸಂವಿಧಾನದ ಅಡಿಯಲ್ಲಿ ಪೊಲೀಸರು ಕೆಲಸ ಮಾಡಬೇಕು. ರಾಜಕೀಯ ಪುಡಾರಿಗಳ ಒತ್ತಡಕ್ಕೆ ಮಣಿದು ಕೆಲಸ ಮಾಡಿದ್ರೆ ಇದನ್ನು‌ ಸಹಿಸಲು ಸಾದ್ಯವಿಲ್ಲ ಎಂದರು.

 

ಬಿಜೆಪಿ ಕಾರ್ಯಕರ್ತರು ಭಾರತ ಮಾತ ಕೀ ಜೈ ಎಂದು ಘೋಷಣೆ ಕೂಗಿದ್ದಕ್ಕೆ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅದರ ವಿಡಿಯೋ ದಾಖಲೆ ಇದೆ.  ಬೇರೆ ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆ ಎಂದು ಹೇಳುವ ಮಂಗಳೂರು ಪೊಲೀಸ್ ಕಮೀಷನರ್ ಅದರ ವಿಡಿಯೋ ಬಿಡುಗಡೆಗೊಳಿಸಲಿ ಎಂದರು.