ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಳ್ಳಾಲ ತಾಲೂಕಿನ ಮಂಜನಾಡಿ ಮೌಲಾನ ಆಜಾದ್ ಮಾದರಿ ಶಾಲೆಗೆ ವಿಜ್ಞಾನ, ಗಣಿತ ಮತ್ತು ದೈಹಿಕ ತರಬೇತಿ ವಿಷಯಕ್ಕೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ಬಿಎಸ್ಸಿ, ಬಿಎಡ್ ಮತ್ತು ದೈಹಿಕ ತರಬೇತಿ ವಿದ್ಯಾರ್ಹತೆಯಾದ ಬಿಪಿಎಡ್, ಡಿಪಿಎಡ್ ಪದವೀಧರರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9449937134 ಹಾಗೂ 9945176137 ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Social Icons