ಜಗತ್ತಿನಲ್ಲಿ ಎರಡು-ಮೂರು ಪ್ರಧಾನಿಗಳ ಸಾವು- ಕೋಡಿಮಠದ ಶ್ರೀ ಭವಿಷ್ಯ| Kodi Mata Sri

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸುವ ತಾಕತ್ತು ಇರುವ ವಿಚಾರಗಳಲ್ಲಿ ಕೋಡಿಮಠದ ಶ್ರೀಗಳು ಹೇಳುವ ಭವಿಷ್ಯಕ್ಕೆ ಮಹತ್ತರ ಪಾತ್ರವಿದೆ. ಹಲವು ಭವಿಷ್ಯ ನುಡಿಗಳನ್ನು ಶ್ರೀಗಳು‌ ಹೇಳಿದ್ದು, ಅವುಗಳು ನಿಜವಾಗಿರುವ ಬಹಳಷ್ಟು ನಿದರ್ಶನಗಳಿವೆ.  ಇದೀಗ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೆ ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ.

ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿರುವ ಕೋಡಿ ಮಠದ ಶ್ರೀಗಳು, ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗುತ್ತದೆ ಎಂದು ಹೇಳಿದ್ದಾರೆ. 

ಧಾರವಾಡದಲ್ಲಿ ಭವಿಷ್ಯ ನುಡಿದ ಶ್ರೀಗಳು, ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡಕು ಹೆಚ್ಚು ಎನ್ನಬಹುದು. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ. ಭೂ ಕುಸಿತ, ಜಲಪ್ರಳಯ ಲಕ್ಷಣ ಇದೆ. ಗಾಳಿಯಿಂದಲೂ ತೊಂದರೆ ಆಗಲಿದೆ. ಆಕಾಶ ತತ್ವ ಆಗಲಿದೆ. ಆ ಆಕಾಶ ತತ್ವ ಏನು ಅನ್ನೋದನ್ನು ಶ್ರಾವಣದಲ್ಲಿ ಹೇಳುವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. 



ಇನ್ನು ಇದೇ ವೇಳೆ ರಾಜಕೀಯ ಬಗ್ಗೆ ಮಾತನಾಡಿರುವ ಕೋಡಿಶ್ರೀ, ರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಕೂಡಿದ್ದಾರೆ, ಇನ್ನೂ ಅಂಗಡಿ ಓಪನ್ ಆಗಿಲ್ಲ. ವ್ಯಾಪಾರ ಶುರುವಾಗಲಿ. ಆ ಬಳಿಕ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುವೆ ಎಂದೂ ಹೇಳಿದ್ದಾರೆ. 

ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವು ಆಗಲಿದೆ. ದೊಡ್ಡ ದೊಡ್ಡವರಿಗೆ ನೋವು ತಾಪ ದುಃಖ ಆಗಲಿದೆ ಎಂದು ಶ್ರೀಗಳು ನುಡಿದಿರುವ ಭವಿಷ್ಯ ವ್ಯಾಪಕ ಚರ್ಚೆಗೂ ಗ್ರಾಸವಾಗಿದೆ.