NAGPURA: ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ: ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವು

 


PTI NEWS

 ನಾಗ್ಪುರ: ನಾಗ್ಪುರ ನಗರದ ಬಳಿಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಐವರು ಮಹಿಳೆಯರು ಸೇರಿದಂತೆ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


 ಇಲ್ಲಿಂದ ಸುಮಾರು 25 ಕಿಮೀ ದೂರದಲ್ಲಿರುವ ಹಿಂಗ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಧಮ್ನಾ ಗ್ರಾಮದ ಚಾಮುಂಡಿ ಎಕ್ಸ್‌ಪ್ಲೋಸಿವ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.


 ಒಟ್ಟು ಒಂಬತ್ತು ಗಾಯಾಳುಗಳನ್ನು ನಗರದ ಎರಡು ಖಾಸಗಿ ಆಸ್ಪತ್ರೆಗಳಿಗೆ ಕರೆತರಲಾಗಿದೆ ಎಂದು ನಾಗ್ಪುರ ಪೊಲೀಸ್ ಕಮಿಷನರ್ ರವೀಂದ್ರ ಸಿಂಘಾಲ್ ತಿಳಿಸಿದ್ದಾರೆ.


 ಅವರಲ್ಲಿ ಐವರು ಮಹಿಳೆಯರು ಮತ್ತು ಓರ್ವ ಪುರುಷ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರು ತಿಳಿಸಿದರು.


 ಸ್ಫೋಟ ಸಂಭವಿಸಿದಾಗ ಮೃತರು ಕಾರ್ಖಾನೆಯ ಪ್ಯಾಕೇಜಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈ ಬಗ್ಗೆ  ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.