ಬೆಂಗಳೂರು: ರಾಜ್ಯದಲ್ಲಿ ಭ್ರೂಣಹತ್ಯೆಯನ್ನು ಸಂಪೂರ್ಣ ತಡೆಗಟ್ಟಲು ನಿರ್ಧರಿಸಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆಯ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ.
ಯಾವುದೇ ಆಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಈ ಹಿಂದೆ 50 ಸಾವಿರ ರೂ. ಬಹುಮಾನ ನೀಡಲಾಗುತ್ತಿತ್ತು. ಇದೀಗ ಈ ಮೊತ್ತವನ್ನು ಒಂದು ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಗುಪ್ತ ಕಾರ್ಯಾಚರಣೆ ಬಗ್ಗೆ ನಿಖರ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 50 ಸಾವಿರ ರೂ. ಹಾಗೂ ಇನ್ನುಳಿದ 50 ಸಾವಿರ ರೂ. ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಸಿ ಆ್ಯಂಡ್ ಪಿಎನ್‌ಡಿಟಿ ಶುಲ್ಕದಿಂದ ನೀಡಲು ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

Social Icons