ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗುತ್ತಿದೆ: ಹರಿಕೃಷ್ಣ ಪುನರೂರು

 

 


ಮುಲ್ಕಿ:ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗುತ್ತಿದ್ದು ಶಾಲೆಗಳಲ್ಲಿ ಕನ್ನಡ ಭಾಷೆಯ ಜೊತೆಗೆ ಸಾಹಿತ್ಯವನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಾಗಿದೆ ಎಂದು ಕಸಾಪ ಮಾಜೀ ರಾಜ್ಯಾಧ್ಯಕ್ಷ ಹಾಗೂ ದ.ಕ. ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಹೇಳಿದರು

ಅವರು ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಉಡುಪಿ, ಕಾಸರಗೋಡು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಸಭೆಯಲ್ಲಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ ಬೆಳಾಲು ರಾಮಕೃಷ್ಣ ಭಟ್ ವಹಿಸಿದ್ದರು

ಮುಖ್ಯ ಅತಿಥಿಗಳಾಗಿ ಸಾಹಿತ್ಯ ಸಂಗಮದ ಮಾಜೀ ಅಧ್ಯಕ್ಷ ವಿಬಿ ಕುಳಮರ್ವ,  ಉಪಾಧ್ಯಕ್ಷೆ ವಿಶಾಲಾಕ್ಷಿ, ಕೋಶಾಧಿಕಾರಿ ಅನಂತಪದ್ಮನಾಭ ಕಾರ್ಯದರ್ಶಿ ಪ್ರೊ. ರಮೇಶ್ ಭಟ್, ಜೊತೆ ಕಾರ್ಯದರ್ಶಿ, ಸಾವಿತ್ರಿ ಆರ್  ಭಟ್ ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ನಿಧನರಾದ ಖ್ಯಾತ ಸಾಹಿತಿ ಪ್ರೊ. ಕಮಲಾ ಹಂಪನ ಅವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.