Putturu: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುತ್ತೂರು ಶಾಸಕರಿಂದ ಗೌರವ ಸನ್ಮಾನ

 


ವರದಿ: ಕವಿತಾ ಕೆ ಮಾಣಿ


ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ನೀಟ್, ಕೆಸಿಇಟಿ ಮತ್ತು ಜೆಇಇ ಯಲ್ಲಿ ಅತ್ಯಧಿಕ ಅಂಪಡೆದ ವಿದ್ಯಾರ್ಥಿಗಳಿಗೆ  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ   ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು.




ಈ ವೇಳೆ ಶಾಸಕ ಅಶೋಕ್ ಕುನಾರ್ ರೈ ಮಾತನಾಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಹೆಜ್ಜೆ ಇಡುವಲ್ಲಿ ನಡೆಯುವ ನೀಟ್ ಪರೀಕ್ಷೆಯಲ್ಲೇ ಹಗರಣ ನಡೆದಿದೆ ಎಂದಾದರೆ ಇದು ವಿದ್ಯಾರ್ಥಿ ಹಾಗೂ ಪೋಷಕರ ಪಾಲಿಗೆ ಬಹು ದೊಡ್ಡ ದುರಂತವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.




ನಮ್ಮ ಕ್ಷೇತ್ರದಲ್ಲಿ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ ಎಂಬುದು ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾವು ಖಂಡಿತವಾಗಿಯೂ ಬೆಂಬಲ ಮತ್ತು ಪ್ರೋತ್ಸಾಹ ನೀಡಬೇಕಾಗಿದ್ದು ನಮ್ಮ ಕರ್ತವ್ಯವಾಗಿದೆ. ನಮ್ಮ ಅನೇಕ ವಿದ್ಯಾರ್ಥಿಗಳು ನೀಟ್ ನಲ್ಲಿಯೂ ಉತ್ತಮ ಪಲಿತಾಂಶವನ್ನು ಪಡೆದಿದ್ದಾರೆ. ನೀಟ್ ನಲ್ಲಿ ದೇಶದಲ್ಲಿ ದೊಡ್ಡ ಹಗರಣವೇ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆಯೆಂದರೆ ನಮ್ಮ ದೇಶದ ಒಂದು ಭೃಷ್ಟತೆಗೆ ಸಾಕ್ಷಿಯಾಗಿದೆ. ಕಷ್ಟಪಟ್ಟು ಓದಿದ ಸಾವಿರಾರು ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯವಾಗಿದ್ದು , ಕಲಿಕೆಯಲ್ಲಿ ಏನೂ ಇಲ್ಲದ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡುವ ಮೂಲಕ ನೀಟ್ ವ್ಯವಸ್ಥೆ ಬಡಪ್ರತಿಭಾವಂತ ವಿದ್ಯಾರ್ಥಿಗಳ ಮೇಲೆ ಪ್ರಹಾರ ನಡೆಸಿದೆ ಎಂದು ಹೇಳಿದರು. ನಮ್ಮ ಕ್ಷೇತ್ರದ ಪ್ರತೀಯೊಬ್ಬ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನನ್ನ ಬೆಂಬಲ ಸದಾ ಇದ್ದು ಏನೇ ಸಹಾಯ ಬೇಕಾದರೂ ನನ್ನನ್ನು ಸಂಪರ್ಕಿಸಬಹುದು ಎಂದು ಹೇಳಿದರು.