SSLC ಪಾಸಾದವರಿಗೆ ಭರ್ಜರಿ ಕೇಂದ್ರ ಸರಕಾರಿ ಉದ್ಯೋಗಾವಕಾಶ- 8326 ಹುದ್ದೆಗೆ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಸರ್ಕಾರದ ಇಲಾಖೆಗಳು, ಸಚಿವಾಲಯಗಳಿಗೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ ಬಿಗ್‌ ನೋಟಿಫಿಕೇಶನ್‌ ಅನ್ನು ಪ್ರಕಟಿಸಿದೆ. ಸ್ಟಾಫ್ ಸೆಲೆಕ್ಷನ್‌ ಕಮಿಷನ್‌ ಇದೀಗ 4887 ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಹಾಗೂ 3439 ಹವಾಲ್ದಾರ್ ಹುದ್ದೆಗಳ ಭರ್ತಿಗೆ ಪರೀಕ್ಷಾ ಅಧಿಸೂಚನೆ ಬಿಡುಗಡೆ ಮಾಡಿದೆ  ಈ ಹುದ್ದೆಗಳಿಗೆ ಜುಲೈ 31 ರವರೆಗೆ ಆನ್‌ಲೈನ್‌ ಅರ್ಜಿಗೆ ಅವಕಾಶ ನೀಡಿದೆ. ಎಸ್‌ಎಸ್‌ಎಲ್‌ಸಿ ಅಥವಾ ಹತ್ತನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.



ಎಸ್ಎಸ್ ಸಿ ಹೊರಡಿಸಿರುವ ನೋಟಿಫಿಕೇಶನ್ ಪ್ರಕಾರ 4887ಮಲ್ಟಿ ಟಾಸ್ಕಿಂಗ್ (ನಾನ್‌ ಟೆಕ್ನಿಕಲ್ ) ಸ್ಟಾಫ್‌,         3439 ಹವಾಲ್ದಾರ್ ಇನ್ ಸಿಬಿಐಸಿ, ಸಿಬಿಎನ್ ಹುದ್ದೆಗಳು ಖಾಲಿಯಿವೆ.  ಎಸ್‌ಎಸ್‌ಸಿ ಎಂಟಿಎಸ್‌, ಹವಾಲ್ದಾರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು.ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಮತ್ತು ಹವಾಲ್ದಾರ್ ಇನ್‌ ಸಿಬಿಎನ್ (ಕಂದಾಯ ಇಲಾಖೆ) ಹುದ್ದೆಗಳಿಗೆ ಗರಿಷ್ಠ 25 ವರ್ಷ ಮೀರಿರಬಾರದು. ಹವಾಲ್ದಾರ್ ಇನ್ ಸಿಬಿಐಸಿ (ಕಂದಾಯ ಇಲಾಖೆ) ಮತ್ತು ಕೆಲವು ಎಂಟಿಎಸ್ ಹುದ್ದೆಗಳಿಗೆ ಗರಿಷ್ಠ 27 ವರ್ಷ ಮೀರಿರಬಾರದು ಎಂದು ಹೇಳಲಾಗಿದೆ.

ಇನ್ನು ಮೀಸಲಾತಿವಾರು ವಯಸ್ಸಿನ ಸಡಿಲಿಕೆ ಕೂಡ ಇದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ,  ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯೂಡಿ ಕ್ಯಾಂಡಿಡೇಟ್ ಗಳಿಗೆ  13 ವರ್ಷ ಮತ್ತು ಮಾಜಿ ಸೈನಿಕರಿಗೆ 3 ವರ್ಷಗಳ ಸಡಿಲಿಕೆ ಕೂಡ ಇದೆ. ಜೂ.27 ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕವಾಗಿದ್ದು, ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಜು.31.