ನವದೆಹಲಿ: ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್ ಬರೇಲಿಯಿಂದ ಸ್ಪರ್ಧಿಸಿ ಎರಡೂ ಕ್ಷೇತ್ರದಲ್ಲಿ ಗೆದ್ದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಿಧಾನಾತ್ಮಕವಾಗಿ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದ್ದು, ವಯನಾಡ್ ಕ್ಷೇತ್ರಕ್ಲೆ ರಾಜೀನಾಮೆ ನೀಡಿ ರಾಯ್ ಬರೇಲಿಯಲ ಕ್ಷೇತ್ರವನ್ನು ಉಳಿಸಿ ಕೊಳ್ಳಲಿದ್ದಾರೆ.
ಈ ವಿಚಾರವನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಖಾರ್ಜುನ ಖರ್ಗೆ ಅವರೇ ಖುದ್ದು ಪತ್ರಿಕಾಗೋಷ್ಠಿಯ ಕರೆದು ಹೇಳಿಕೊಂಡಿದ್ದಾರೆ.
ಇನ್ನು ವಯನಾಡ್ ನಲ್ಲಿ ತೆರವಾದ ಸ್ಥಾನದಲ್ಲಿ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವಯನಾಡ್ ಲೋಕಸಭಾ ಕ್ಷೇತ್ರದ ಜನ ರಾಹುಲ್ ಗಾಂಧಿಯನ್ನು ಬಹಳಷ್ಟು ನೆಚ್ಚಿಕೊಂಡಿದ್ದಾರೆ. ಅಲ್ಲಿನ ಜನ ಬಹಳಷ್ಟು ಪ್ರೀತಿ ನೀಡಿದ್ದಾರೆ. ಹಾಗಂತ ಎರಡೂ ಕ್ಷೇತ್ರದಲ್ಲಿ ಮುಂದುವರಿಯಲು ಕಾನೂನಿನಲ್ಲಿ ಅವಕಾಶವಿಲ್ಲ. ಹಾಗಾಗಿ ಅನಿವಾರ್ಯವಾಗಿ ಒಲ್ಲದ ಮನಸ್ಸಿನಿಂದ ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಖರ್ಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇನ್ನು ವಯನಾಡ್ ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

Social Icons