ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರನ್ನು ಬಂಧಿಸುವಂತಹ ಕಠಿಣ ಕ್ರಮಕ್ಕೆ ಮುಂದಾಗದಂತೆ ಇಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ಪ್ರಕರಣದ ಆರೋಪಿಯಾಗಿರುವ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಅರ್ಜಿದಾರರು ತಿಳಿಸಿರುವಂತೆ ಜುಲೈ 17ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಒಳಗಾಗಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.
ಹೀಗಾಗಿ ಯಡಿಯೂರಪ್ಪನವರಿಗೆ ಮುಂದಿನ ವಿಚಾರಣೆವರೆಗೂ ಬಿಗ್ ರಿಲೀಫ್ ಸಿಕ್ಕಿದೆ.

Social Icons