ಮಂಗಳೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿಯುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಅಂದರೆ ಜು.18ರ ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜು.18ರಿಂದ ಜು.22ರವರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ರಸ್ತೆಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ 90.10ರ ಭಾಗದಲ್ಲಿ ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ/ಸಿಬ್ಬಂದಿಗಳ ವಾಹನ ಹೊರತುಪಡಿಸಿ ಉಳಿದಂತೆ ಎಲ್ಲಾ ವಾಹನಗಳ ಸಂಚಾರವನ್ನು ಜು.18ರಿಂದ 22ರವರೆಗೆ ಪ್ರತೀ ದಿನ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ನಲ್ಲಿ ಗೇಟನ್ನು ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ಮುಚ್ಚುವಂತೆ
ಜಿಲ್ಲಾಧಿಕಾರಿಗಳು ತಿಳಿಸಿದ್ದು,
ಮಡಿಕೇರಿಯ ಟೋಲ್ ಗೇಟ್ ನಲ್ಲಿಯೂ ಬ್ಯಾರಿಕೇಡ್ ಇಟ್ಟು ರಾತ್ರಿ ವಾಹನ ಸಂಚಾರವನ್ನು
ನಿಷೇಧಿಸಲಾಗಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ್ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ.



Social Icons