ಅಮೆರಿಕದ ಸ್ವಾತಂತ್ರ್ಯ ಸಂಭ್ರಮಾಚರಣೆ - ಜನರ ಗುಂಪಿನೆಡೆಗೆ ನುಗ್ಗಿದ ಟ್ರಕ್ ಮೂವರ ದುರ್ಮರಣ, 9ಮಂದಿಗೆ ಗಾಯ



ವಾಷಿಂಗ್ಟನ್: ಅಮೆರಿಕಾದ ಸ್ವಾತಂತ್ರ್ಯ ಸಂಭ್ರಮಾಚರಣೆ ವೇಳೆ ಸೇರಿದ್ದ ಜನಗಳ ಗುಂಪಿನ ನಡುವಿಗೇ ಟ್ರಕ್ಕೊಂದು ನುಗ್ಗಿದ ಪರಿಣಾಮ ಮೂವರು ಮೃತಪಟ್ಟು 9 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ನ್ಯೂಯಾರ್ಕ್‌ ನಗರದ ಕಾರ್ಲಿಯರ್ಸ್ ಹೂಕ್ ಪಾರ್ಕ್‌ನಲ್ಲಿ ಈ ದುರ್ಘಟನೆ ನಡೆದಿದೆ. ಅತಿ ವೇಗದಿಂದ ಚಲಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳಿದ್ದೆಡೆಗೆ  ನುಗ್ಗಿದೆ. ಟ್ರಕ್ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಜನರ ಗುಂಪಿನ ಮೇಲೆಯೇ ನುಗ್ಗಿದ್ದ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಎಳೆಯ ಮಕ್ಕಳು ಸಾವನ್ನಪ್ಪಿದ್ದಾರೆ. ಇತರ 9 ಮಂದಿ ಗಾಯಗೊಂಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಚಾಲಕ ಮದ್ಯದ ಅಮಲಿನಲ್ಲಿದ್ದುದೇ ಈ ಅವಘಡಕ್ಲೆ ಕಾರಣ ಎನ್ನಲಾಗಿದೆ. ಅಪಘಾತದ ಬಳಿಕ ಆತ ತನ್ನ ಕಾರಿನಲ್ಲಿ ಅಲ್ಲಿಂದ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆಗ ಸ್ಥಳೀಯರು ಆತನನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಎನ್ನಿಸಿ ನ್ಯೂಯಾರ್ಕ್ ಸುದ್ದಿಸಂಸ್ಥೆ ವರದಿ ಮಾಡಿದೆ.