ಖ್ಯಾತ ನಿರೂಪಕಿ ಅಪರ್ಣಾ ನಿಧನ : APARNA

 



ಬೆಂಗಳೂರು: ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ(51) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.


ಅನಾರೋಗ್ಯದಿಂದ ಬಳಲುತ್ತಿದ್ದ ಅಪರ್ಣಾ ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

 ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿ ಮೂಲದವರಾಗಿರುವ 

 ಅವರು ದೂರದರ್ಶನದಲ್ಲಿ ನಿರೂಪಕಿಯಾಗಿ, ರೇಡಿಯೋ ಜಾಕಿಯಾಗಿ  ಜನಪ್ರಿಯರಾಗಿದ್ದರು. 

1990 ರ ದಶಕದಲ್ಲಿ ದೂರದರ್ಶನದಲ್ಲಿ ದಲ್ಲಿ ಪ್ರಸಾರವಾದ ವಿವಿಧ ಕಾರ್ಯಕ್ರಮಗಳ ನಿರೂಪಕಿಯಾಗಿ ಕೆಲಸ ಮಾಡಿದ್ದರು . 1984 ರಲ್ಲಿ ಪುಟ್ಟಣ್ಣ ಕಣಗಾಲ್ ಅವರ ಕೊನೆಯ ಚಿತ್ರ ಮಸಣದ ಹೂವು ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. 2015 ಮತ್ತು 2021 ರ ನಡುವೆ ಕಾಮಿಡಿ ಶೋ, ಮಜಾ ಟಾಕೀಸ್‌ನಲ್ಲಿ ವರಲಕ್ಷ್ಮಿ ಪಾತ್ರವನ್ನು ನಿರ್ವಹಿಸಿಯೂ ಜನಪ್ರಿಯರಾಗಿದ್ದರು.


ಅಪರ್ಣಾ ಅವರು ಮೂಡಲ ಮನೆ ಮತ್ತು ಮುಕ್ತ ಮೊದಲಾದ ದೂರದರ್ಶನ ಕಾರ್ಯಕ್ರಮಗಳಲ್ಲಿ ನಟಿಯಾಗಿ ಕೆಲಸ ಮಾಡಿದ್ದಾರೆ . 2013 ರಲ್ಲಿ, ಅವರು ಈಟಿವಿ ಕನ್ನಡದಲ್ಲಿ ಪ್ರಸಾರವಾದ ಕನ್ನಡ ರಿಯಾಲಿಟಿ ಟೆಲಿವಿಷನ್ ಶೋ ಬಿಗ್ ಬಾಸ್‌ನ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು.