ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ

 


ಮಂಗಳೂರು: ದಕ್ಷಿಣ ಕನ್ನಡ ತೀವ್ರ ಮಳೆಯಾಗುತ್ತಿದ್ದು,‌ ಜುಲೈ 6 ಶನಿವಾರದಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ‌‌ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಅಲ್ಲದೇ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಆದೇಶಿಸಲಾಗಿದೆ. 

ಸಾರ್ವಜನಿಕರಿಗೆ ನದೀ ತೀರ, ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ.