ಮಂಗಳೂರು: ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರು ತಾಲೂಕಿನ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರಿದಿದ್ದು, ಜುಲೈ 11ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಇತರ ತಾಲೂಕಿನಲ್ಲಿ ಶಾಲೆ- ಕಾಲೇಜುಗಳು ಕಾರ್ಯಾಚರಿಸಲಿದೆ.

Social Icons