ಕ್ರಿಕೆಟ್ ಆಟಗಾರ ಕೆ ಎಲ್ ರಾಹುಲ್ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ | K L RAHUL

 



ಮೂಲ್ಕಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು
ಈ ಸಂದರ್ಭ  ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.
ಬಳಿಕ ಕ್ರಿಕೆಟ್ ಆಟಗಾರ ರಾಹುಲ್ ಮುಲ್ಕಿ ಸೀಮೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನಕ್ಕೆ ಹಾಗೂ ಕಕ್ವಗುತ್ತು ಮೂಲ ನಾಗನ ಕ್ಷೇತ್ರಕ್ಕೆ ಭೇಟಿ ನೀಡಿದರು
ಈ ಸಂದರ್ಭ ಬಪ್ಪನಾಡು ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕೆ ಎಲ್ ರಾಹುಲ್ ಪತ್ನಿ ಬಾಲಿವುಡ್ ನಟಿ ಅತಿಯಾ ಶೆಟ್ಟಿ, ನಟ ಅಹನ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ಅಶ್ವಿನ್ ಆಳ್ವ ಕುಬೆವೂರು ಮತ್ತಿತರರು ಉಪಸ್ಥಿತರಿದ್ದರು