ಮಂಗಳೂರು : ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಪೊಲೀಸರು ಮಂಗಳೂರು ನಗರದ ಜೈಲಿಗೆ ದಿಢೀರ್ ದಾಳಿ ನಡೆಸಿ ಜೈಲಿನಲ್ಲಿ ಖೈದಿಗಳು ಅಕ್ರಮವಾಗಿ ಬಳಸುತ್ತಿದ್ದ ಡ್ರಗ್ಸ್, ಗಾಂಜಾ, ಮೊಬೈಲ್ ಸಹಿತ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3 ಕೇಬಲ್‌ಗಳು ಮತ್ತು ಗಾಂಜಾ ಹಾಗೂ ಇತರ ಡ್ರಗ್ಸ್ ಗಳ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಂದು ಮುಂಜಾನೆ 4 ಗಂಟೆಗೆ ಕಾರ್ಯಾಚರಣೆ ಆರಂಭವಾಗಿತ್ತು. ಈ ಕಾರ್ಯಾಚರಣೆಯಲ್ಲಿ 2 ಡಿಸಿಪಿಗಳು, 3 ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು. ಜೈಲಿನ ಎಲ್ಲಾ ಬ್ಲಾಕ್‌ಗಳನ್ನು ಏಕಕಾಲದಲ್ಲಿ ಶೋಧ ಮಾಡಲು ಹಲವಾರು ತಂಡಗಳನ್ನು ರಚಿಸಲಾಗಿತ್ತು.

Social Icons