PUTTUR: ಕರಾವಳಿ ಪ್ರಾಧಿಕಾರದಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಸಚಿವರಿಗೆ ಶಾಸಕರ ಮನವಿ

ಕರಾವಳಿ ಪ್ರಾಧಿಕಾರದಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವ ಮೂಲಕ ಅಭಿವೃದ್ದಿಗೆ ಸಹಕಾರ ನೀಡುವಂತೆ ಶಾಸಕ ಅಶೋಕ್ಯೋ ರೈ ಅವರು ಯೋಜನೆಯ ಸಾಂಘಿಕ ಮತ್ತು ಸಂಯೋಜನಾ ಸಚಿವರೂ , ಕರಾವಳಿ ಪ್ರಾಧಿಕಾರದ ಅಧ್ಯಕ್ಷರೂ ಆದ ಡಿ ಸುಧಾಕರ್ ಅವರಿಗೆ ಮನವಿ ಮಾಡಿದ್ದಾರೆ.



ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈಯವರು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ಆಗಬೇಕಾಗಿದ್ದು, ಕ್ಷೇತ್ರದ ಜನರಿಂದ ಬೇಡಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹಲವಾರು ವರ್ಷಗಳಿಂದ ಜನರು ಮನವಿ ಮಾಡುತ್ತಿದ್ದರೂ ಅಭಿವೃದ್ದಿ ಕೆಲಸಗಳು ನಡೆದಿಲ್ಲ ಎಂಬ ಆರೋಪ ಕ್ಷೇತ್ರದ ಜನರಲ್ಲಿ ಇದ್ದು ಈ ಬಾರಿ ಪುತ್ತೂರಿಗೆ ಕರಾವಳಿ ಪ್ರಾಧಿಕಾರದಿಂದ ಹೆಚ್ಚು ಅನುದಾನವನ್ನು ನೀಡುವ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಸಹಕಾರ ನೀಡಬೇಕೆಂದು ಸಚಿವರಿಗೆ ಶಾಸಕರು ಮನವಿ ಮಾಡಿದ್ದಾರೆ. ಶಾಸಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಅಭಿವೃದ್ದಿ ವಿಚಾರದಲ್ಲಿ ನೀವು ಸಲ್ಲಿಸಿದ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆಯನ್ನು ನೀಡಿದ್ದಾರೆ.