ಖಾಸಗಿ ವಾಹನಗಳಲ್ಲಿ "ವಕೀಲರ ಸ್ಟಿಕ್ಕರ್" ಹಾಕಿ ದುರ್ಬಳಕೆ: ಕಠಿಣ ಕ್ರಮ ಕೈಗೊಳ್ಳಲು ಮದ್ರಾಸ್ ಹೈಕೋರ್ಟ್ ಆದೇಶ
ಖಾಸಗಿ ವಾಹನಗಳ ಮೇಲೆ "ವಕೀಲರ ಸ್ಟಿಕ್ಕರ್" ಹಾಕಿಕೊಂಡು ಅವುಗಳನ್ನು ದುರ್ಬಳಕೆ ಮಾಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.
ಮದ್ರಾಸ್ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆರ್. ಮಹಾದೇವನ್ ಮತ್ತು ನ್ಯಾ. ಮೊಹಮ್ಮದ್ ಶಫೀಕ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.
ಕೆಲವು ವಕೀಲರು ತಮ್ಮ ಖಾಸಗಿ ವಾಹನಗಳ ಮೇಲೆ ವಕೀಲರ ಸ್ಟಿಕ್ಕರ್ ಅಂಟಿಸಿಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಎಸ್. ದೇವದಾಸ್ ಗಾಂಧಿ ವಿಲ್ಸನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದಾಗ ಪೊಲೀಸರ ಕ್ರಮದಿಂದ ತಪ್ಪಿಸಿಕೊಳ್ಳಲು ಹಾಗೂ ಪೊಲೀಸರನ್ನು ಬೆದರಿಸಲು ವಕೀಲರ ಸ್ಟಿಕ್ಕರ್‌ಗಳನ್ನು ಖಾಸಗಿ ವಾಹನಗಳ ಮೇಲೆ ಅಳವಡಿಸಿರುತ್ತಾರೆ. ಈ ಮೂಲಕ ವಕೀಲರ ಸ್ಟಿಕ್ಕರ್ ದುರ್ಬಳಕೆಯಾಗುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದರು.
Social Icons