ವರದಿ; ಜಯಂತ್ ಎ
ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 16) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಸೇರಿದಂತೆ ಪದವಿ ಪೂರ್ವ ತರಗತಿಗಳಿಗೆ ರಜೆ ಘೋಷಿಸಲಾಗಿದೆ.
Social Icons