ಮಹಿಳಾ ಸಬಲೀಕರಣಕ್ಕೆ 3 ಲಕ್ಷ ಕೋಟಿ ಮೀಸಲಿಡುವ ಮೂಲಕ ಹೆಣ್ಣು ಮಕ್ಕಳ ಯೋಜನೆಗೆ ಹಾಗೂ ಆರ್ಥಿಕ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸುವಲ್ಲಿ ಸರ್ಕಾರದ ಈ ನಿರ್ಧಾರ ಮಹತ್ವದ ಪಾತ್ರ ವಹಿಸಿದೆ. ಸ್ತ್ರೀಯರು ಖರೀದಿಸುವ ಆಸ್ತಿ ಮೇಲೆ ಸುಂಕ ಇಳಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕೇಂದ್ರೀಕರಿಸಿದೆ.
ರೈಲ್ವೆಗೆ ದಾಖಲೆಯ 2.25 ಲಕ್ಷ ಕೋಟಿ ಅನುದಾನ ಘೋಷಣೆ ಮಾಡುವ ಮೂಲಕ ರೈಲ್ವೆ ಇಲಾಖೆಯ ಕ್ರಾಂತಿಕಾರಿ ಬದಲಾವಣೆ ಯೋಜನೆಗೆ ಮತ್ತಷ್ಟೂ ವೇಗ ದೊರಕಲಿದೆ. ರಾಜ್ಯದ ರೈಲ್ವೇ ಯೋಜನೆಗಳಿಗೆ 7,500ಕೋಟಿ ಅನುದಾನವನ್ನ ಒದಗಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ ಸಂಶೋಧನೆ, ತಂತ್ರಜ್ಞಾನ, ಖಾಸಗಿ ಸಹಭಾಗಿತ್ವದ ಮೂಲಕ ಆಧುನಿಕ ಸ್ಪರ್ಶ ನೀಡಲು ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ 1.52 ಲಕ್ಷ ಕೋಟಿ ಘೋಷಣೆ ಮಾಡಿದೆ.
ತೆರಿಗೆ ಸ್ಲ್ಯಾಬ್ ಗಳ ಬದಲಾವಣೆ ಅಗತ್ಯ ಔಷಧಿಗಳ ಬೆಲೆ ಇಳಿಕೆ, ಯುವಕರಿಗೆ ಕೌಶಲ್ಯ ಅಭಿವೃದ್ಧಿಗೆ ಹೊಸ ಯೋಜನೆ ರೂಪಿಸುವ ಮೂಲಕ ಮುಂದಿನ 5 ವರ್ಷ ಅವಧಿಗೆ ಭಾರತಕ್ಕೆ ದಿಕ್ಸೂಚಿ ನೀಡಬಲ್ಲ ಹಾಗೂ 2047 ಕ್ಕೆ ಭಾರತವನ್ನು ವಿಕಸಿತ ದೇಶವನ್ನಾಗಿ ಮಾಡಲು ಅಡಿಪಾಯ ಹಾಕಬಲ್ಲ ಮುಂಗಡ ಪತ್ರ ಇದಾಗಿದೆ.
ವರದಿ : ಜಯಂತ್ ಉಡುಪಿ
Social Icons