UDUPI ಉಡುಪಿಯಲ್ಲಿ ನಾಲ್ಕು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಉಡುಪಿ, ಕಾಪು,ಕಾರ್ಕಳ, ಹೆಬ್ರಿ ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ ಗಳು ಆದೇಶ ನೀಡಿದ್ದಾರೆ.