UDUPI ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ

ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ

ಉಡುಪಿ : ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನೆರವೇರಿತು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲೆಯ ಪ್ರವರ್ಗ ಬಿ ಮತ್ತು ಪ್ರವರ್ಗ ಸಿ ದರ್ಜೆಯ ದೇವಸ್ಥಾನಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮತ್ತು ಈ ದೇವಸ್ಥಾನವು ಹಿಂ.ದಾ.ದ ಇಲಾಖೆಗೆ ಸೇರಿದೆ ಎಂಬ ಸ್ಪಷ್ಟ ಉಲ್ಲೇಖ ಮಾಡುವುದು, ಪ್ರವರ್ಗ ಬಿ ಯ 4 ದೇವಾಲಯಗಳು ಮತ್ತು ಪ್ರವರ್ಗ ಸಿ ಯ 38 ಸೇರಿದಂತೆ ಒಟ್ಟು 42 ದೇವಾಲಯಗಳಿಗೆ ನೂತನ ವ್ಯವಸ್ಥಾಪನಾ ಸಮಿತಿ ರಚಿಸಲು ಅನುಮೋದನೆ ಪಡೆಯಲಾಯಿತು.

ಈ ಬಾರಿ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿಗಳನ್ನು ಸ್ವೀಕರಿಸಿ ಆಯ್ಕೆ ಪ್ರಕ್ರಿಯೆ ನಡೆಸುವ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಸಹಾಯಕ ಆಯುಕ್ತ ಪ್ರಶಾಂತ ಕುಮಾರ ಶೆಟ್ಟಿ,ಮತ್ತಿತರರು ಭಾಗವಹಿಸಿದ್ದರು.