ಸಚಿವರು ಕೂಡಲೇ ಅನುದಾನ ಬಿಡುಗಡೆ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ್ದಾರೆ.
ಕೋಡಿಬೆಂಗ್ರೆ-ಹೂಡೆ ಮಾದರಿಯಲ್ಲಿ ತಡೆಗೋಡೆಗೆ ಆಗ್ರಹ:
ಈಗಾಗಲೇ ಕೋಡಿಬೆಂಗ್ರೆ-ಹೂಡೆ ಭಾಗದಲ್ಲಿ ಶಾಶ್ವತ ತಡೆಗೋಡೆ ನಿರ್ಮಿಸಿದ ನಂತರ ಕಡಲ್ಕೋರೆತ ಸಮಸ್ಯೆ ಪರಿಹಾರವಾಗಿದ್ದು ಅದೇ ಮಾದರಿಯಲ್ಲಿ ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಆಗ್ರಹಿಸಿದ್ದಾರೆ.
ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಜಯಂತ್ ಉಡುಪಿ
Social Icons