ಉಡುಪಿ : ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಕೃಷಿಭೂಮಿಗಳು ಜಲಾವೃತಗೊಂಡಿವೆ.ಈ ಮಳೆಗಾಲಕ್ಕೆ ಉಳಿಮೆ ಮಾಡಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿರುವ ರೈತರು ತಮ್ಮ ಕೃಷಿ ಭೂಮಿಯು ನೆರೆ ನೀರಿನಿಂದ ಮುಳುಗಿರುವುದರಿಂದ ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದಾರೆ. ಬ್ರಹ್ಮಾವರ ತಾಲೂಕಿನ ಅರೂರು ಬೆಳ್ಮಾರು ಸಂಪರ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು ಈ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ.ನಿನ್ನೆ ರಾತ್ರಿಯಿಂದ ಜಿಲ್ಲೆಯಾದ್ಯಂತ ಭಾರಿ ಮಳೆ ಆಗಿದ್ದು ಇಂದು ಬೆಳಗ್ಗಿನ ಹೊತ್ತು ಮಳೆ ಸ್ವಲ್ಪ ವಿರಾಮ ಪಡೆದಿದೆ. ಇನ್ನು ಉಪ್ಪೂರು ಸಮೀಪ ತಗ್ಗು ಪ್ರದೇಶದಲ್ಲಿ ಶಾಲೆಯೊಂದಿದ್ದು ಶಾಲಾ ಕಟ್ಟಡ ಜಲಾವೃತಗೊಂಡಿದೆ.ಜಿಲ್ಲೆಯ ಉಳಿದ ಭಾಗಗಳಲ್ಲೂ ಕಳೆದ ಎರಡು ದಿನಗಳ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ.
Social Icons