UDUPI ನಾಗೂರು ಗ್ರಾಮದ ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ದಿಢೀರನೆ ಕಾಣಿಸಿಕೊಂಡ ಮೊಸಳೆ

ಉಪ್ಪುಂದ :  ಬೈಂದೂರು ತಾಲೂಕಿನ ಕಿರಿಮಂಜೇಶ್ವರ  ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನ ಬಾವಿ ಒಂದರಲ್ಲಿ ಮಂಗಳವಾರ ಮೊಸಳೆ ಪ್ರತ್ಯಕ್ಷವಾಗಿದೆ.

ನಾಗೂರು ಗ್ರಾಮದ ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ದಿಢೀರನೆ ಕಾಣಿಸಿಕೊಂಡಿದೆ.
ಮೊಸಳೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಎಲ್ಲರ ಎದೆಯೇ ನಡುಗಿ ಹೋಗುತ್ತದೆ. ಅಷ್ಟರಮಟ್ಟಿಗೆ ಮೊಸಳೆಗಳು ಎಲ್ಲರಲ್ಲೂ ಭೀತಿ ಮೂಡಿಸಿವೆ.

ಬೈಂದೂರು ಅರಣ್ಯ ಇಲಾಖೆ, ಪೋಲಿಸ್ ಇಲಾಖೆ, ಅಗ್ನಿಶಾಮಕ ದಳ ಕಂದಾಯ ಇಲಾಖೆ ಅವರ ಸಹಾಯದೊಂದಿಗೆ ಬಾವಿಗೆ ಬಲೆ ಹಾಕುವುದರ ಮೂಲಕ ಕಾರ್ಯಾಚರಣೆ ನಡೆಸಿದರು.

 ಸ್ಥಳೀಯರ ಸಹಾಯದಿಂದ ಅರಣ್ಯ ಇಲಾಖೆಯವರು ಮೊಸಳೆಗೆ ಬೋನ್ ಇಟ್ಟು ನಾಗೂರು ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸಲ್ಯೂಷನ್ ಇವರ ಸಹಕಾರದೊಂದಿಗೆ  ಬಾವಿಯ ಸುತ್ತಲೂ ಸಿ ಸಿ ಕ್ಯಾಮೆರಾವನ್ನು ಅಳವಡಿಸಿ ದೂರದಿಂದ ಕಂಪ್ಯೂಟರ್ ಮೂಲಕ ಮೊಸಳೆಯ ಓಡಾಟವನ್ನು ಗಮನಿಸಲಾಗುತ್ತಿದೆ. 
ಮೊಸಳೆ ಬಾವಿಯಿಂದ ಹೊರ ಬರಲು ಬಾವಿಯ ದಂಡೆಯನ್ನು ನೆಲಸಮಾನಕ್ಕೆ ಒಡೆದು ಮೊಸಳೆ ಬೊನಿಗೆ ಕೋಳಿಯ ಮಾಂಸವನ್ನು ಹಾಕಿ ಸದ್ಯಕ್ಕೆ ಇಡಲಾಗಿದೆ. ಮೊಸಳೆಯನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ

ಮೊಸಳೆ ಬಾವಿಯಲ್ಲಿ ಇರುವ ಮಾಹಿತಿ ಸಿಕ್ಕಿದಂತೆ ಸಾವಿರಾರು ಜನರು ಮೊಸಳೆ ನೋಡಲು ಬರುತ್ತಿದ್ದಾರೆ.  
ಜನರು ತಡೆಯಲು ಪೋಲಿಸ್ ಇಲಾಖೆ ಬಿಗಿ ಬಂದ ಬಿಗಿ ಭದ್ರತೆ ಮಾಡಿದ್ದಾರೆ. ಸಿಸಿ ಕ್ಯಾಮೆರಾದ ಮೂಲಕ ಮೊಸಳೆಯ ಚಲನ ವಲನದ ಬಗ್ಗೆ ನಿಗಾ ಇಡಲಾಗಿದೆ.