ಮಂಗಳೂರು: ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಆ.2ರಂದು ರಜೆ



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ.2ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ‌ಮುಗಿಲನ್ ಆದೇಶಿಸಿದ್ದಾರೆ.


 ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದೆ. ಆದ್ದರಿಂದ ಆಗಸ್ಟ್ 2 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.