ಪುತ್ತೂರು: ಅಪ್ರಾಪ್ತೆಗೆ ಚೂರಿಯಿಂದ ಇರಿದ ವಿದ್ಯಾರ್ಥಿ



ಪುತ್ತೂರು: ಅಪ್ರಾಪ್ತೆಯ ಕೈಗೆ ಆಕೆ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ವಿದ್ಯಾರ್ಥಿಯೇ ಚೂರಿಯಿಂದ ಇರಿದ ಘಟನೆ ದ.ಕ. ಜಿಲ್ಲೆಯ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಸದ್ಯ ಪುತ್ತೂರು ನಗರ ಠಾಣಾ ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ‌.


ಗಾಯಾಳು ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಮುಂದೆ ಜನ ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೋಲೀಸರು ಅಲ್ಲಿ ಸೇರಿದ್ದ ಜನರನ್ನು ಆಸ್ಪತ್ರೆಯಿಂದ ಹೊರಗೆ ಕಳುಹಿಸುತ್ತಿದ್ದಾರೆ‌. ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಒತ್ತಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಬಾಲಕಿ ಆರೋಪಿಸಿದ್ದಾಳೆ. 


ಈ ಬಗ್ಗೆ ಪುತ್ತೂರು ನಗರ ಠಾಣಾ ಪೊಲೀಸರಿಂದ ತನಿಖೆ ನಡೆಯುತ್ತಿದೆ.