BANTWAL: ಭ್ರಷ್ಟಾಚಾರರಹಿತ ಆಡಳಿತ – ಉಪಾಧ್ಯಕ್ಷರಾಗಿ ಆಯ್ಕೆಯಾದ SDPI ಸದಸ್ಯ ಮುನೀಶ್ ಆಲಿ

 


ಬಂಟ್ವಾಳ: ಭ್ರಷ್ಟಾಚಾರರಹಿತ ಆಡಳಿತಕ್ಕೆ ಒತ್ತು ನೀಡುವೆ ಎಂದು ಬಂಟ್ವಾಳ ಪುರಸಭೆ ಉಪಾಧ್ಯಕ್ಷ ಮುನೀಶ್ ಆಲಿ ತಿಳಿಸಿದ್ದಾರೆ.

ಪುರಸಭೆ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಉಪಾಧ್ಯಕ್ಷ ಮುನೀಶ್ ಆಲಿ, ತಾನು ಒಂದು ಪೈಸೆ ಭ್ರಷ್ಟಾಚಾರಕ್ಕೂ ಅವಕಾಶ ನೀಡದಂತೆ ಕೆಲಸ ಮಾಡುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ. ಪುರಸಭೆ ಭ್ರಷ್ಟಾಚಾರಮುಕ್ತವಾಗಿ ಆಡಳಿತ ಮಾಡಬೇಕು ಎಂಬ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ ಎಂದರು.