ಬಂಟ್ವಾಳ : ಅಪರಿಚಿತ ಮಹಿಳೆಯ ಶವವೊಂದು ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಆ.20 ರಂದು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಶಂಭೂರು ಗ್ರಾಮದಲ್ಲಿರುವ ಎ.ಎಮ್.ಆರ್.ಪವರ್ ಲಿ.ಡ್ಯಾಂನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತದೇಹವನ್ನು ನೋಡಿ ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ್ದಾರೆ.
ಡ್ಯಾಂ ನ 6 ನೇ ಗೇಟ್ ನ ಬಳಿ ಸುಮಾರು 40-55 ವರ್ಷದ ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದ್ದು, ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಪೋಲೀಸರಿಗೆ ಮೇಲ್ನೋಟಕ್ಕೆ ಕಂಡುಬಂದಿದೆ. ಅಪರಿಚಿತ ಮಹಿಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನ್ನಪ್ಪಿರಬಹುದೇ ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂಬುದು ಇನ್ನೂ ತಿಳಿದುಬರಬೇಕಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ವಾರೀಸದಾರರಿದ್ದಲ್ಲಿ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಗ್ರಾಮಾಂತರ ಠಾಣೆಯ ಎಸ್ ಐ ಹರೀಶ್ ತಿಳಿಸಿದ್ದಾರೆ.

Social Icons