BANTWAL: ಬಂಟ್ವಾಳದಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯ ನಡೆಸುವೆ – ವಾಸು ಪೂಜಾರಿ

ಬಂಟ್ವಾಳ: ಬಂಟ್ವಾಳ ಪುರಸಭೆ ನೂತನ ನೂತನ ಅಧ್ಯಕ್ಷ ವಾಸು ಪೂಜಾರಿ, ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ಧಿ ಕಾರ್ಯಕ್ಕೆ ತನ್ನ ಆದ್ಯತೆ ಎಂದಿದ್ದಾರೆ, ಬಂಟ್ವಾಳದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು. 

ಮಾಜಿ ಸಚಿವ ಬಿ.ರಮಾನಾಥ ರೈ ಮಾರ್ಗದರ್ಶನದಲ್ಲಿ ತಾನು ಇಂದು ಅಧ್ಯಕ್ಷನಾಗಿ ಆಯ್ಕೆಯಾಗುವುದು ಸಾಧ್ಯವಾಗಿದೆ. ಕಳಂಕರಹಿತ ಆಡಳಿತ ನೀಡುವೆ ಎಂದರು. ಈ ಸಂದರ್ಭ ಕಾಂಗ್ರೆಸ್ ಪುರಸಭಾ ಸದಸ್ಯರು, ಪಕ್ಷ ಪ್ರಮುಖರಾದ ಪಿಯೂಸ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಮತ್ತಿತರ ನಾಯಕರು ಜತೆಗಿದ್ದರು.